-ಶೌರ್ಯ ಡೆಸ್ಕ್
ವಿದೇಶಿ ಕಾರ್ಮಿಕರು ವಾಸ್ತವ್ಯವಿದ್ದ ಇಕ್ಕಟ್ಟಾದ ವಸತಿಗೃಹದಲ್ಲಿ ಅಗ್ನಿ ಅವಘಡ ಸಂಭವಿಸಿ ಬೆಂಕಿಯ ಕೆನ್ನಾಲಿಗೆಯಲ್ಲಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ. ನೆಲ ಮಹಡಿಯಲ್ಲಿದ್ದ ವಾಹನ ದುರಸ್ತಿ ಗ್ಯಾರೇಜ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಕಟ್ಟಡದ ಮೇಲಿನ ಅಂತಸ್ತಿನಿಂದ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಜಾಗತಿಕ ಸುದ್ದಿವಾಹಿನಿಗಳು ವರದಿ ಮಾಡಿವೆ.

ಮಾಲ್ಡೀವ್ಸ್ ರಾಜಧಾನಿ ಮಾಲೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ9 ಮಂದಿ ಭಾರತೀಯರು ಸೇರಿದಂತೆ 10 ಮಂದಿ ಸಾವನ್ನಪ್ಪಿದ್ದಾರೆ.
ವಿದೇಶಿ ಕಾರ್ಮಿಕರು ವಾಸ್ತವ್ಯವಿದ್ದ ಇಕ್ಕಟ್ಟಾದ ವಸತಿಗೃಹದಲ್ಲಿ ಅಗ್ನಿ ಅವಘಡ ಸಂಭವಿಸಿ ಬೆಂಕಿಯ ಕೆನ್ನಾಲಿಗೆಯಲ್ಲಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ.

ನೆಲ ಮಹಡಿಯಲ್ಲಿದ್ದ ವಾಹನ ದುರಸ್ತಿ ಗ್ಯಾರೇಜ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಕಟ್ಟಡದ ಮೇಲಿನ ಅಂತಸ್ತಿನಿಂದ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಜಾಗತಿಕ ಸುದ್ದಿವಾಹಿನಿಗಳು ವರದಿ ಮಾಡಿವೆ.
ಘಟನಾ ಸ್ಥಳದಿಂದ 10 ದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಮೃತಪಟ್ಟಿರುವ 10 ಮಂದಿಯ ಪೈಕಿ 9 ಮಂದಿ ಭಾರತೀಯರು ಹಾಗೂ ಓರ್ವ ಬಾಂಗ್ಲಾದೇಶದ ಪ್ರಜೆಯಾಗಿದ್ದಾನೆಂದು ವರದಿಗಳಿಂದ ತಿಳಿದುಬಂದಿದೆ.

ಘಟನೆಗೆ ಮಾಲ್ಡೀವ್ಸ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಯಭಾರ ಕಚೇರಿ, ಮಾಲೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಘಟನೆಯಿಂದ ಭಾರತೀಯ ಪ್ರಜೆಗಳು ಸೇರಿದಂತೆ ಜೀವಹಾನಿಗಳು ಸಂಭವಿಸಿವೆ. ಘಟನೆ ತೀವ್ರ ದುಃಖವನ್ನುಂಟು ಮಾಡಿದೆ. ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುತ್ತೇವೆಂದು ಹೇಳಿದೆ.
ಅಲ್ಲದೆ, ಮಾಲ್ಡೀವಿಯನ್ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಯಾವುದೇ ಸಹಾಯಕ್ಕಾಗಿ ರಾಯಭಾರಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.