28.2 C
Bengaluru
Tuesday, March 21, 2023
spot_img

2ನೇ  ಮದುವೆಯಾಗಿ ಮೋಸ–ಅಟ್ಟಿಕಾ ಗೋಲ್ಡ್‌ ಮಾಲೀಕ ಬಂಧನ

-ಶೌರ್ಯ ಡೆಸ್ಕ್

ಎರಡನೇ ಮದುವೆಯಾಗಿ ಮೋಸ ಮಾಡಿರುವುದಾಗಿ ಮಹಿಳೆಯೊಬ್ಬರು ಆಂಧ್ರಪ್ರದೇಶದಲ್ಲಿ ಅಟ್ಟಿಕಾ ಬಾಬು ವಿರುದ್ಧ ದೂರು ದಾಖಲಿಸಿದ್ದರು. ಹಾಗಾಗಿ ಬೆಂಗಳೂರಿಗೆ ಆಗಮಿಸಿದ ಆಂಧ್ರಪ್ರದೇಶ ಪೊಲೀಸರು ಬಾಬು ಬಂಧಿಸಿದ್ದಾರೆ. 

ಅಟ್ಟಿಕಾ ಗೋಲ್ಡ್ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಮಹಿಳೆಗೆ ಮೋಸ ಮಾಡಿರುವ ಆರೋಪದಡಿ ಬಂಧಿತರಾಗಿದ್ದಾರೆ. ಆಂಧ್ರಪ್ರದೇಶದ ಪೊಲೀಸರು ಬಾಬು ಬಂಧಿಸಿದ್ದಾರೆ. ಎರಡನೇ ಮದುವೆಯಾಗಿ ಮೋಸ ಮಾಡಿರುವುದಾಗಿ ಮಹಿಳೆಯೊಬ್ಬರು ಆಂಧ್ರಪ್ರದೇಶದಲ್ಲಿ ಅಟ್ಟಿಕಾ ಬಾಬು ವಿರುದ್ಧ ದೂರು ದಾಖಲಿಸಿದ್ದರು. ಹಾಗಾಗಿ ಬೆಂಗಳೂರಿಗೆ ಆಗಮಿಸಿದ ಆಂಧ್ರಪ್ರದೇಶ ಪೊಲೀಸರು ಬಾಬು ಬಂಧಿಸಿದ್ದಾರೆ. 

ಶೇಕ್ ಮೀನಾಜ್ ಎಂಬಾಕೆಯನ್ನು ಮದುವೆಯಾಗಿದ್ದ ಅಟ್ಟಿಕಾ ಬಾಬು ಮೋಸ ಮಾಡಿದ್ದಾರೆ ಎನ್ನಲಾಗಿದೆ. ಡಿಸೆಂಬರ್ 12 ರಂದು ಯಲ್ಲೂರಿಗೆ ಹೋಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನನ್ನ ಮೇಲೆ ಹಲ್ಲೆ ಮಾಡಿ ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ ಎಂದು ಶೇಕ್ ಮೀನಾಜ್ ಆರೋಪಿಸಿ ಅಟ್ಟಿಕಾ ಬಾಬು ವಿರುದ್ಧ ಆಂಧ್ರಪ್ರದೇಶದ ಯಲ್ಲೂರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ IPC section 448,342,307,386,427,498A,506 ಮತ್ತು ವರದಕ್ಷಿಣೆ ಕಿರುಕುಳ ಅರೋಪದಡಿ ಕೇಸ್ ದಾಖಲಾಗಿತ್ತು. ಆ ಬಳಿಕ ಯಲ್ಲೂರು ಪೊಲೀಸರು ಬೆಂಗಳೂರಿಗೆ ಆಗಮಿಸಿ ಸಿಸಿಬಿ ಹಾಗೂ ಹೈಗ್ರೌಂಡ್ಸ್ ಪೊಲೀಸರ ಸಹಾಯದಿಂದ ಇಂದು ಅಟ್ಟಿಕಾ ಬಾಬುರನ್ನು ವಶಕ್ಕೆ ಪಡೆದು ಅನಂತಪುರಕ್ಕೆ ಕರೆದೊಯ್ದಿದ್ದರು. ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

14FansLike
35FollowersFollow
47FollowersFollow
- Advertisement -spot_img

Latest Articles