30.6 C
Bengaluru
Wednesday, March 15, 2023
spot_img

ಜಯಲಲಿತಾ ಸಾವಿಗೆ ಶಶಿಕಲಾ ಕಾರಣ: ಸ್ಫೋಟಕ ವರದಿ ಸರ್ಕಾರಕ್ಕೆ ಸಲ್ಲಿಕೆ

-ಶೌರ್ಯ ಡೆಸ್ಕ್

ಸಮಿತಿಯ ಪರಿಶೀಲನೆಯ ಪ್ರಕಾರ ಜಯಲಲಿತಾ ಸಾವು ಪ್ರಕರಣದಲ್ಲಿ ಅವರ ಆಪ್ತ ಸಹಾಯಕಿ ವಿ.ಕೆ ಶಶಿಕಲಾ, ಡಾ ಶಿವಕುಮಾರ್ (ಜಯಲಲಿತಾ ಅವರ ಆಪ್ತ ವೈದ್ಯ ಮತ್ತು ಶಶಿಕಲಾ ಅವರ ಸಂಬಂಧಿ), ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಮತ್ತು ಮಾಜಿ ಆರೋಗ್ಯ ಸಚಿವ ಸಿ ವಿಜಯಭಾಸ್ಕರ್ ಅವರನ್ನು ತಪ್ಪಿತಸ್ಥರೆಂದು ಗುರುತಿಸಿದ್ದು, ಅವರ ವಿರುದ್ಧ ತನಿಖೆ ನಡೆಸಬೇಕೆಂದು ಹೇಳಿದೆ.

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕಾಲಿಕ ಸಾವಿಗೆ ಅವರ ಆಪ್ತೆ ವಿ.ಕೆ ಶಶಿಕಲಾ ನೇರ ಕಾರಣ ಎಂಬ ಸ್ಫೋಟಕ ಸುದ್ದಿ ಹೊರಬಿದ್ದಿದೆ. ತಮಿಳುನಾಡು ಸರ್ಕಾರವೇ ರಚಿಸಿದ್ದ ನ್ಯಾ. ಆರುಮುಗಸ್ವಾಮಿ ಆಯೋಗ ತನ್ನ ವರದಿಯಲ್ಲಿ ರಹಸ್ಯ ಬಯಲಿಗೆ ಎಳೆದಿದೆ.

ಜೆ ಜಯಲಲಿತಾ ಅವರ ಸಾವಿನ ಕುರಿತಾದ ತನ್ನ 608 ಪುಟಗಳ ವರದಿಯನ್ನು ನ್ಯಾ. ಆರುಮುಗಸ್ವಾಮಿ ಆಯೋಗ ಸಲ್ಲಿಸಿದ ವರದಿ ಮಂಗಳವಾರ ವಿಧಾನಸಭೆಯಲ್ಲಿ ಮಂಡನೆಯಾಗಿದೆ

ಸಮಿತಿಯ ಪರಿಶೀಲನೆಯ ಪ್ರಕಾರ ಜಯಲಲಿತಾ ಸಾವು ಪ್ರಕರಣದಲ್ಲಿ ಅವರ ಆಪ್ತ ಸಹಾಯಕಿ ವಿ.ಕೆ ಶಶಿಕಲಾ, ಡಾ ಶಿವಕುಮಾರ್ (ಜಯಲಲಿತಾ ಅವರ ಆಪ್ತ ವೈದ್ಯ ಮತ್ತು ಶಶಿಕಲಾ ಅವರ ಸಂಬಂಧಿ), ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಮತ್ತು ಮಾಜಿ ಆರೋಗ್ಯ ಸಚಿವ ಸಿ ವಿಜಯಭಾಸ್ಕರ್ ಅವರನ್ನು ತಪ್ಪಿತಸ್ಥರೆಂದು ಗುರುತಿಸಿದ್ದು, ಅವರ ವಿರುದ್ಧ ತನಿಖೆ ನಡೆಸಬೇಕೆಂದು ಹೇಳಿದೆ.

ನ್ಯಾಯಮೂರ್ತಿ ಎ ಆರುಮುಗಸ್ವಾಮಿ ಸಮಿತಿಯೂ ಜಯಲಲಿತಾ ಆಸ್ಪತ್ರೆಗೆ ದಾಖಲಾದ ದಿನದಿಂದ ಅವರಿಗೆ ನೀಡಿದ ಎಲ್ಲಾ ಬಗೆಯ ಚಿಕಿತ್ಸೆಗಳ ಬಗ್ಗೆ ಅಧ್ಯಯನ ಮಾಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಸಮಿತಿಯೂ ಈ ಹಿಂದೆ ವರದಿಯನ್ನು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರಿಗೆ ಸಲ್ಲಿಸಿತ್ತು. ಇದಾದ ಬಳಿಕ ಕಳೆದ ಆಗಸ್ಟ್ನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಗಿತ್ತು.

ತಮಿಳುನಾಡು ಸರ್ಕಾರ ಈ ವರದಿಯ ಅನುಸಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದ್ದು, ಜಯಲಲಿತಾ ಅಭಿಮಾನಿಗಳು ಹೇಗೆ ಈ ಕಹಿಸತ್ಯ ಅರಗಿಸಿಕೊಳ್ಳುತ್ತಾರೆ ನೋಡಬೇಕಿದೆ.

Related Articles

LEAVE A REPLY

Please enter your comment!
Please enter your name here

Stay Connected

14FansLike
35FollowersFollow
46FollowersFollow
- Advertisement -spot_img

Latest Articles