–ಶೌರ್ಯ ಡೆಸ್ಕ್
ಈ ಬಾರಿಯ ಸಮ್ಮೇಳನಕ್ಕೆ ಎಂಟರಿಂದ ಹತ್ತು ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, 30 ಸಾವಿರ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಪ್ರತಿ ದಿನ 2.50 ಲಕ್ಷ ಜನರಿಗೆ ಊಟೋಪಚಾರ ವ್ಯವಸ್ಥೆ ಮಾಡಲಾಗುತ್ತದೆ. ಸಮ್ಮೇಳನ ಹಿನ್ನೆಲೆ ರಾಜ್ಯಾದ್ಯಂತ 45 ದಿನ ಕನ್ನಡ ರಥ ಮೆರವಣಿಗೆ ನಡೆಯಲಿದೆ. ಈ ಬಗ್ಗೆ ಸಿದ್ಧತೆಗಾಗಿ ಅಕ್ಟೋಬರ್ 20ರಂದು ಹಾವೇರಿಯಲ್ಲಿ ಸಿದ್ಧತಾ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಈ ಬಾರಿಯ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿ 6, 7 ಮತ್ತು 8 ರಂದು ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ. ಈ ಬಾರಿ ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯಲ್ಲಿ ಅದ್ಧೂರಿ ಸಾಹಿತ್ಯ ಸಮ್ಮೇಳನ ಜರುಗಲಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಿ ದಿನಾಂಕವನ್ನು ಅಂತಿಮಗೊಳಿಸಿದ್ದಾರೆ. ಅರ್ಥಪೂರ್ಣ ಗೋಷ್ಠಿ ಆಯೋಜಿಸಿ ಗೋಷ್ಠಿಗಳಲ್ಲಿ ಹೆಚ್ಚಿನ ಜನ ಭಾಗವಹಿಸುವಂತಾಗಬೇಕು ಹಾಗೂ ಅವು ಅರ್ಥಪೂರ್ಣವಾಗಿರಬೇಕು. ಸಮಿತಿಗಳಲ್ಲಿ ಸಕ್ರಿಯವಾಗಿರುವ ಸ್ಥಳೀಯ ಜನರನ್ನು ತೊಡಗಿಸಿಕೊಳ್ಳಬೇಕು. ಗೋಷ್ಠಿಗಳಲ್ಲಿಯೂ ಸ್ಥಳೀಯರಿಗೆ ಅವಕಾಶ ನೀಡಬೇಕು. ಎಲ್ಲಾ ತಾಲ್ಲೂಕುಗಳ ಸ್ವಯಂಸೇವಕರು ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.

ಎಂಟರಿಂದ ಹತ್ತು ಲಕ್ಷ ಜನ ಸೇರುವ ನಿರೀಕ್ಷೆ
ಸಮ್ಮೇಳನಕ್ಕೆ ಎಂಟರಿಂದ ಹತ್ತು ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, 30 ಸಾವಿರ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಪ್ರತಿ ದಿನ 2.50 ಲಕ್ಷ ಜನರಿಗೆ ಊಟೋಪಚಾರ ವ್ಯವಸ್ಥೆ ಮಾಡಲಾಗುತ್ತದೆ. ಸಮ್ಮೇಳನ ಹಿನ್ನೆಲೆ ರಾಜ್ಯಾದ್ಯಂತ 45 ದಿನ ಕನ್ನಡ ರಥ ಮೆರವಣಿಗೆ ನಡೆಯಲಿದೆ. ಈ ಬಗ್ಗೆ ಸಿದ್ಧತೆಗಾಗಿ ಅಕ್ಟೋಬರ್ 20ರಂದು ಹಾವೇರಿಯಲ್ಲಿ ಸಿದ್ಧತಾ ಸಭೆ ನಡೆಸಲು ತೀರ್ಮಾನಿಸಲಾಗಿದೆ

ಈ ಭಾರಿ 86 ಸಾಧಕರಿಗೆ ಸನ್ಮಾನಿಸಲು ನಿರ್ಧಾರ ಮಾಡಲಾಗಿದ್ದು, ಸಮ್ಮೇಳನದ ಭಾಗವಾಗಿ 20ಕ್ಕೂ ಹೆಚ್ಚು ಉಪಸಮಿತಿಗಳ ರಚನೆ ಮಾಡಲಾಗಿದೆ.
ಈ ಹಿಂದೆ ನ. 11, 12, 13 ರಂದು ಸಮ್ಮೇಳನ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಸಿಎಂ ಬೊಮ್ಮಾಯಿ ಕಾರ್ಯಗಳು ಮತ್ತು ಸಮ್ಮೇಳನಕ್ಕೆ ಅಗತ್ಯ ಸಿದ್ದತೆಯಾಗದ ಕಾರಣ ಮುಂದೂಡಲಾಗಿತ್ತು.
ಸಚಿವ ಸುನೀಲ್ ಕುಮಾರ್ ಅವರು ಇಂದು ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಸಭೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್, ಕಸಾಪ ಅಧ್ಯಕ್ಷ ಮಹೇಶ್ ಜೋಷಿ, ಶಾಸಕರಾದ ನೆಹರು ಓಲೇಕಾರ್, ಅರುಣ್ ಕುಮಾರ್, ಹಾವೇರಿ ಡಿಸಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.