22.8 C
Bengaluru
Wednesday, March 22, 2023
spot_img

2ಎ ಮೀಸಲಾತಿ ವಿವಾದ-ರಾಜ್ಯಪಾಲರ ಅಂಗಳಕ್ಕೆ ಚೆಂಡು

ಹಿಂದುಳಿದ ವರ್ಗಗಳಿಗೆ ವಿಶೇಷ ಪ್ಯಾಕೇಜ್ ಕೋರಿಕೆ

-ಶೌರ್ಯ ಡೆಸ್ಕ್

ಶನಿವಾರ ಕರ್ನಾಟಕ ಕ್ಷತ್ರಿಯ ಒಕ್ಕೂಟದ ರಾಜ್ಯಾಧ್ಯಕ್ಷ ಉದಯ್ ಸಿಂಗ್ ಅವರ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ನಾಯಕರ ನಿಯೋಗ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಯಿತು. ರಾಜ್ಯದ ಹಿಂದುಳಿದ ಮತ್ತು ಅತಿಹಿಂದುಳಿದ ವರ್ಗಗಳ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಅವರಿಗೆ ವಿವರಿಸಿ ಓಬಿಸಿ ತಳಸಮುದಾಯಗಳ ಕಲ್ಯಾಣಕ್ಕೆ ನೀತಿ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿ ಮಾಡಿತು. ಅರ್ಧ ತಾಸಿಗೂ ಹೆಚ್ಚು ಕಾಲ ರಾಜ್ಯದ ಹಿಂದುಳಿದ ಸಮುದಾಯಗಳ ಪ್ರಸ್ತುತ ಸ್ಥಿತಿಗತಿ ಮತ್ತು ಬದುಕು ಬವಣೆಗಳ ಬಗ್ಗೆ ಉದಯ್ ಸಿಂಗ್ ಅವರಿಂದ ಮಾಹಿತಿ ಪಡೆದ ರಾಜ್ಯಪಾಲರು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಚುನಾವಣೆ ಹತ್ತಿರವಿರುವಾಗ ಶುರು ಆಗಿರುವ 2ಎ ಮೀಸಲಾತಿ ವಿವಾದ ರಾಜಭವನದ ಅಂಗಳ ತಲುಪಿದೆ. ಅತಿ ಹಿಂದುಳಿದ ಸಮುದಾಯಗಳಿರುವ ಪ್ರವರ್ಗಗಳಿಗೆ ಯಾವುದೇ ಮುಂದುವರೆದ ಜನಾಂಗಗಳನ್ನು ಸೇರ್ಪಡೆ ಮಾಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಹಿಂದುಳಿದ ವರ್ಗಗಳ ನಾಯಕರ ನಿಯೋಗ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದೆ. ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ರೂಪಿಸುವಂತೆ ಹಾಗೂ ರಾಜಕೀಯ ಮೀಸಲಾತಿ ಹೆಚ್ಚಿಸುವಂತೆ ಕೋರಿಕೆ ಸಲ್ಲಿಸಿದೆ.

ಶನಿವಾರ ಕರ್ನಾಟಕ ಕ್ಷತ್ರಿಯ ಒಕ್ಕೂಟದ ರಾಜ್ಯಾಧ್ಯಕ್ಷ ಉದಯ್ ಸಿಂಗ್ ಅವರ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ನಾಯಕರ ನಿಯೋಗ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಯಿತು. ರಾಜ್ಯದ ಹಿಂದುಳಿದ ಮತ್ತು ಅತಿಹಿಂದುಳಿದ ವರ್ಗಗಳ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಅವರಿಗೆ ವಿವರಿಸಿ ಓಬಿಸಿ ತಳಸಮುದಾಯಗಳ ಕಲ್ಯಾಣಕ್ಕೆ ನೀತಿ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿ ಮಾಡಿತು. ಅರ್ಧ ತಾಸಿಗೂ ಹೆಚ್ಚು ಕಾಲ ರಾಜ್ಯದ ಹಿಂದುಳಿದ ಸಮುದಾಯಗಳ ಪ್ರಸ್ತುತ ಸ್ಥಿತಿಗತಿ ಮತ್ತು ಬದುಕು ಬವಣೆಗಳ ಬಗ್ಗೆ ಉದಯ್ ಸಿಂಗ್ ಅವರಿಂದ ಮಾಹಿತಿ ಪಡೆದ ರಾಜ್ಯಪಾಲರು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ರಾಜ್ಯದ ಅತಿ ಹಿಂದುಳಿದ ವರ್ಗಗಳು ಇಂದಿಗೂ ಮುಖ್ಯವಾಹಿನಿ ತಲುಪುದೇ ಅರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ರಾಜಕೀಯ ಸೇರಿ ಸಾಮಾಜಿಕ ನ್ಯಾಯದಿಂದ ವಂಚಿತವಾಗಿದ್ದು ಸಂವಿಧಾನ ಬದ್ಧ ಹಕ್ಕು, ಸವಲತ್ತು ಮೀಸಲಾತಿಯಲ್ಲಿ ಸಮಪಾಲು ದೊರೆತಿಲ್ಲ. ಹೀಗಿರುವಾಗಲೇ ಅತಿ ಹಿಂದುಳಿದ ವರ್ಗಗಳಿಗೆ ಮಾರಕವಾಗುವಂತೆ ಮೀಸಲಾತಿ ವ್ಯವಸ್ಥೆ ಬದಲಿಸುವ ಪ್ರಸ್ತಾವನೆಗಳು ಕೇಳಿಬರುತ್ತಿದ್ದು, ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳಿಗೆ ಹಕ್ಕು, ನ್ಯಾಯ ಕೊಡಿಸುವ ನಿರ್ದಿಷ್ಟ ಕ್ರಮ ಮತ್ತು ಪರ್ಯಾಯ ವ್ಯವಸ್ಥೆ ಜಾರಿಯಾಗದೇ ಕರ್ನಾಟಕ ಸರ್ಕಾರ ಯಾವುದೇ ಮೀಸಲಾತಿ ಪಲ್ಲಟಗಳಿಗೆ ಮುಂದಾಗದAತೆ ನಿರ್ದೇಶಿಸಬೇಕೆಂದು ಮತ್ತು ಓಬಿಸಿ ತಳಸಮುದಾಯಗಳಿಗೆ ಎಲ್ಲಾ ವಲಯಗಳಲ್ಲಿ ವಿಶೇಷ ಕೋಟಾ ನಿಗದಿಪಡಿಸುವಂತೆ ಆದೇಶಿಸಬೇಕೆಂದು ರಾಜ್ಯಪಾಲರನ್ನು ಉದಯ್ ಸಿಂಗ್ ಕೋರಿದರು.

ಕ್ಷತ್ರಿಯ ಒಕ್ಕೂಟದ ಮಹಿಳಾ ಘಟಕ ರಾಜ್ಯಾಧ್ಯಕ್ಷರಾದ ಉಮಾ ಮೂರ್ತಿರಾವ್, ಕಾರ್ಯದರ್ಶಿ ರೋಹಿತ್ ಮುನಿರಾಜು, ಅಗ್ನಿವಂಶದ ಯಜಮಾನ್ ಗಂಗಹನುಮಯ್ಯ, ಭಾವಸಾರ ಸಮಾಜ ನಾಯಕರಾದ ಸತೀಶ್ ಅಂಬುರೆ, ತಿಗಳ ಸಮುದಾಯದ ನರೇಂದ್ರ ಮತ್ತಿತರಿದ್ದರು.

ರಾಜ್ಯಪಾಲರಿಗೆ ಸಲ್ಲಿಸಿದ ಮನವಿ ಪ್ರಮುಖಾಂಶಗಳು

* ರಾಜ್ಯದ ಕೆಲ ಬಲಿಷ್ಠ ಸಮುದಾಯಗಳಿಗೆ 2ಎ ಮೀಸಲಾತಿ ನೀಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು ಇದು ಅತಿಹಿಂದುಳಿದ ವರ್ಗಗಳಿಗೆ ಮಾಡುವ ಘೋರ ಅನ್ಯಾಯವಾಗಿದೆ. ಸಾಮಾಜಿಕ ನ್ಯಾಯ ಕಾಪಾಡಬೇಕಾದ ಸರ್ಕಾರ ಕೇವಲ ಒಂದು ಸಮುದಾಯವನ್ನು ಓಲೈಸಲು ಹೊರಟಿದ್ದು ಆ ಸಮುದಾಯಕ್ಕೆ ಶೇ.15 ರಷ್ಟು ಮೀಸಲಾತಿ ದೊರಕಿಸಿಕೊಡಲು ಹೊರಟರೆ ಪ್ರಸ್ತುತ ಪ್ರವರ್ಗ 2ಎ ಪಟ್ಟಿಯಲ್ಲಿರುವ 102 ಕ್ಕೂ ಹೆಚ್ಚು ಜಾತಿಗಳು ಮೀಸಲಾತಿಯಿಂದ ವಂಚಿತವಾಗುತ್ತವೆ. ಬಲಿಷ್ಠ ಸಮಾಜಕ್ಕೆ ಪೂರ್ತಿ ಮೀಸಲಾತಿ ಸವಲತ್ತು ದೊರೆತು ಸಣ್ಣ ಅತಿಸಣ್ಣ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ಸಿಗಬೇಕೆಂಬ ಮೀಸಲಾತಿಯ ಸಾಂವಿಧಾನಿಕ ಆಶಯವೇ ಮಣ್ಣು ಪಾಲಾಗಲಿದೆ.

* ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಪ್ರಬಲವಾಗಿರುವ ಸಮುದಾಯ ಮತ್ತು ಅದರೊಳಗಿನ ಉಪಜಾತಿಗಳನ್ನು 2ಎ ಪಟ್ಟಿಗೆ ಸೇರ್ಪಡೆ ಮಾಡಿದರೆ ಪ್ರವರ್ಗ 2ಎ ಮೀಸಲಾತಿ ಪಟ್ಟಿಯಲ್ಲಿರುವ ಕ್ಷತ್ರಿಯ ಜನಾಂಗ ಮತ್ತು ನಮ್ಮ ಉಪಜಾತಿಗಳು ಸೇರಿ ಅತಿ ಹಿಂದುಳಿದ 102 ಕ್ಕೂ ಹೆಚ್ಚು ಜಾತಿಗಳಿಗೆ ಅನ್ಯಾಯವಾಗುತ್ತದೆ. ಇದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದು ನಾವು ಸಹಿಸಲು ಸಾಧ್ಯವಿಲ್ಲ.

* ಕರ್ನಾಟಕ ರಾಜ್ಯದ ರಾಜಕೀಯ, ಶಿಕ್ಷಣ, ಉದ್ಯಮ ಎಲ್ಲಾ ವಲಯದಲ್ಲಿ ಪ್ರಬಲವಾಗಿ ಬೆಳೆದಿರುವ, ಸ್ವಾತಂತ್ರ್ಯ ಬಂದಾಗಿನಿAದ ಈವರೆಗೂ ಬಹುತೇಕ ರಾಜ್ಯ ರಾಜಕಾರಣವನ್ನು ನಿಯಂತ್ರಿಸುತ್ತ ಬಂದಿರುವ, ಶೇ.50 ಕ್ಕೂ ಹೆಚ್ಚು ರಾಜಕೀಯ ಪಾಲು ಹೊಂದಿರುವ ಮತ್ತು ಪ್ರತಿವರ್ಷ ಸಾವಿರಾರು ಕೋಟಿ ಅನುದಾನಗಳನ್ನು  ಮಠಮಾನ್ಯಗಳು, ನಿಗಮಗಳು, ಪ್ರಾಧಿಕಾರಗಳ ಮೂಲಕ  ಪಡೆಯುತ್ತಾ ಬಂದಿರುವ ಸಮುದಾಯವನ್ನು 2ಎ ಗೆ ಸೇರಿಸುವುದು ಸರ್ವಥಾ ನ್ಯಾಯಬದ್ಧವಾಗಿರುವುದಿಲ್ಲ.

ರಾಜಕೀಯ ಕ್ಷೇತ್ರದಲ್ಲಿ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಅತಿಹೆಚ್ಚು ಪ್ರಾತಿನಿಧ್ಯ ಪಡೆದುಕೊಳ್ಳುವ, ರಾಜ್ಯದ ಪ್ರಬಲ ಭೂಮಾಲೀಕತ್ವ ಹೊಂದಿರುವ ಸಮುದಾಯದವರು ಅತಿ ಹಿಂದುಳಿದವರ ಹಕ್ಕು ಕಸಿಯುವುದು ಅನ್ಯಾಯ. ಈಗಾಗಲೇ `3ಬಿ’ ಯಲ್ಲಿರುವ ಸಮುದಾಯ ಉದ್ಯಮಗಳು, ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಉದ್ಯೋಗ, ಆಡಳಿತರಂಗ ಹೀಗೆ ಎಲ್ಲೆಡೆ ಸಿಂಹಪಾಲು ಹೊಂದಿವೆ. ಇದರಿಂದ ಆ ಸಮಾಜ ಸಹಜವಾಗಿಯೇ ಬಲಿಷ್ಠವಾಗಿದೆ. ಹೀಗಿದ್ದಾಗ್ಯೂ ಅತೀ ಹಿಂದುಳಿದ ಸಮುದಾಯ ಎಂದು ಹೇಳಿಕೊಳ್ಳುವುದು ಅರ್ಥಹೀನವಾಗಿದೆ. ಮತ ಬ್ಯಾಂಕ್‌ಗಾಗಿ ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಪ್ರಬಲ ಸಮುದಾಯದ 2ಎ ಪ್ರಸ್ತಾವನೆಗೆ ಕುಮ್ಮಕ್ಕು ನೀಡುತ್ತಿರುವುದು ಅತಿ ಹಿಂದುಳಿದ ವರ್ಗಗಳು ದಮನ ಮಾಡಲು ಪ್ರಯತ್ನಿಸಿದಂತೆಯೇ ಸರಿ.

* ಬಲಿಷ್ಠವಾಗಿ ಬೆಳೆದು ರಾಜ್ಯದ ಮೇಲ್ವರ್ಗವಾಗಿ ಗುರುತಿಸಿಕೊಂಡರೂ ಪ್ರವರ್ಗ `2ಎ’ಗೆ ಸೇರಲು ಹವಣಿಸುತ್ತಿರುವುದು ನಮ್ಮ ಪ್ರವರ್ಗಕ್ಕೆ ಮೀಸಲಿರುವ ಶೇ.15 ರಷ್ಟು ಮೀಸಲು ಕಬಳಿಸಲು ಎಂಬುದು ಎಂತವರಿಗಾದರೂ ಅರ್ಥವಾಗುವಂತದ್ದಾಗಿದ್ದು ಇದಕ್ಕೆ ಸರ್ಕಾರ ಪ್ರೋತ್ಸಾಹ ನೀಡುತ್ತಿರುವುದು ಅತಿ ಹಿಂದುಳಿದ ವರ್ಗಗಳಿಗೆ ಧ್ವನಿ ಇಲ್ಲದ ಸಮುದಾಯಗಳಿಗೆ ವಂಚನೆ ಮಾಡುವ ಧೋರಣೆಯಾಗಿದೆ.

* ಪ್ರವರ್ಗ 2ಎ ಪಟ್ಟಿಯಲ್ಲಿರುವ 102 ಜಾತಿಗಳ ಪೈಕಿ ಬೆರಣಿಕೆ ಸಮುದಾಯಗಳು ಬಿಟ್ಟು ಇತರೆ ಯಾವುದೇ ಸಮುದಾಯ ಈವರೆಗೂ ನ್ಯಾಯಬದ್ಧ ಹಕ್ಕು ಪಡೆದುಕೊಂಡಿಲ್ಲ. ಅನೇಕ ಸಣ್ಣ ಅತಿ ಸಣ್ಣ ಸಮುದಾಯಗಳು ಇಂದಿಗೂ ನಿಕೃಷ್ಣ ಸ್ಥಿತಿಯಲ್ಲಿ ಬದುಕುತ್ತಿವೆ. ಶಿಕ್ಷಣ, ಉದ್ಯೋಗ, ಆರ್ಥಿಕ ಮತ್ತು ಸಾಮಾಜಿಕವಾಗಿ ಸುಧಾರಣೆಯಾಗದೆ ಸಮಾಜದ ಮುಖ್ಯವಾಹಿನಿಯಿಂದ ದೂರ ಉಳಿದಿವೆ. ಕುಂಬಾರ, ಮಡಿವಾಳ, ಸವಿತಾ, ಗಾಣಿಗ, ಹಳೆಪೈಕ, ದೇವಾಂಗ ಇಂತಹ ಸಮಾಜಗಳಲ್ಲದೆ ಕ್ಷತ್ರಿಯ ಸಮುದಾಯದ ರಾಮ ಕ್ಷತ್ರಿಯ, ಕೋಟೆ ಕ್ಷತ್ರಿಯ, ಸೋಮವಂಶ ಕ್ಷತ್ರಿಯ, ರಾಜು ಕ್ಷತ್ರಿಯ, ಕುಮಾರ ಕ್ಷತ್ರಿಯ, ಕುಮಾರ ಪಂತ್ ಕ್ಷತ್ರಿಯ, ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ, ಭಾವಸಾರ ಕ್ಷತ್ರಿಯ, ವಹ್ನಿಕುಲ ಕ್ಷತ್ರಿಯ, ಅಗ್ನಿಕುಲ ಕ್ಷತ್ರಿಯ, ಶಂಭುಕುಲ ಕ್ಷತ್ರಿಯ, ತಿಗಳ, ನಯನಜ ಕ್ಷತ್ರಿಯ ಹೀಗೆ ಅನೇಕ ಜಾತಿಗಳು ರಾಜಕೀಯವಾಗಿ ಮತ್ತು ಆರ್ಥಿಕವಾಗಿ ದುರ್ಬಲವಾಗಿವೆ. ಬಲಿಷ್ಠ ಜಾತಿಯನ್ನು ಪ್ರವರ್ಗ ‘2ಎ’ ಗೆ ಸೇರಿಸಿದರೆ ನಮ್ಮ ಅತಿಹಿಂದುಳಿದ ಸಮುದಾಯಗಳಿಗೆ ಮೀಸಲಾತಿ ಬಾಗಿಲು ಸಂಪೂರ್ಣ ಮುಚ್ಚಿ ಹೋಗುತ್ತದೆ.

* ಪ್ರಬಲ ಸಮುದಾಯ 2ಎ ಪಟ್ಟಿಯಲ್ಲಿರುವ ನಮ್ಮ ಪಾಲನ್ನು ಕಬಳಿಸಲು ಬಂದರೆ ನಾವೆಲ್ಲಿ ಹೋಗಬೇಕು? ಪರ್ಯಾಯ ವ್ಯವಸ್ಥೆ ಆಗದೆ ಬಲಿಷ್ಠ ಸಮಾಜವನ್ನು ದುರ್ಬಲ ಸಮುದಾಯಗಳ ನಡುವೆ ತಂದು ಬಿಟ್ಟರೆ ನಾವು ಉಳಿಯುವುದು ಸಾಧ್ಯವೇ? ಇದನ್ನು ಒಪ್ಪಲು ಎಂದಿಗೂ ಸಾಧ್ಯವಿಲ್ಲ.

*ಆದ್ದರಿಂದ 2ಎ ಪ್ರವರ್ಗಕ್ಕೆ ಸೇರಿದ ಸಮುದಾಯಗಳ ಮೀಸಲಾತಿಗೆ ಚ್ಯುತಿ ಬರದ ರೀತಿಯಲ್ಲಿ ನಡೆದುಕೊಳ್ಳಬೇಕೆಂದು ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇವೆ. ಹಾಗೂ 2ಎ ಪ್ರವರ್ಗ ಮತ್ತು ಇತರೆ ಹಿಂದುಳಿದ ಪ್ರವರ್ಗದಲ್ಲಿದ್ದು ಸೂಕ್ತ ಮೀಸಲಾತಿ ಹಕ್ಕು ಪಡೆಯದ ಜನಜಾತಿಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಸಿದ್ಧಪಡಿಸಬೇಕು. ರಾಜಕೀಯ ನಾಮನಿರ್ದೇಶನಗಳಲ್ಲಿ ಶೇ. 50 ರಷ್ಟು ಪಾಲು ಕೊಡಬೇಕು. ಶಿಕ್ಷಣ ಮತ್ತು ಉದ್ಯೋಗದಲ್ಲಿ ವಿಶೇಷ ಆದ್ಯತೆ ನೀಡಲು ನಿಯಮ ರೂಪಿಸಲು ನಿರ್ದೇಶನ ನೀಡಬೇಕೆಂದು ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರಾದ ತಮ್ಮಲ್ಲಿ ಕಳಕಳಿಯ ಮನವಿ ಮಾಡುತ್ತೇವೆ.

Related Articles

LEAVE A REPLY

Please enter your comment!
Please enter your name here

Stay Connected

14FansLike
35FollowersFollow
47FollowersFollow
- Advertisement -spot_img

Latest Articles