-ಶೌರ್ಯ ಡೆಸ್ಕ್
ತೆಲಂಗಾಣದಲ್ಲಿ ಅಷ್ಟು ಸುಲಭವಾಗಿ ಅಕ್ರಮ ಹಣದಿಂದ ಸರ್ಕಾರವನ್ನು ಅಸ್ಥಿರಗೊಳಿಸುವುದು ಅಸಾಧ್ಯ. ಇವತ್ತು ನೇರವಾಗಿ 17 ಕೋಟಿ ಹಣದೊಂದಿಗೆ ಸಿಕ್ಕಿಬಿದ್ದಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಯವರು ಯಾಕೆ ಜಾಣ ಮೌನ ತಾಳಿದ್ದಾರೆ. ಪ್ರಧಾನಿ ಹಾಗೂ ಇಡಿಯವರು ಇದಕ್ಕೆ ಉತ್ತರ ಕೊಡಬೇಕಿದೆ. ಈ ಹಣ ಎಲ್ಲಿಂದ ಹೇಗೆ ಬಂತು ಎಂಬುದರ ಬಗ್ಗೆ ಹೇಳಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು.

ತೆಲಂಗಾಣದಲ್ಲಿ ಆಪರೇಷನ್ ಕಮಲ ಮಾಡಲು ಬಿಜೆಪಿ ಪ್ರಯತ್ನ ಮಾಡಿದ ಬಗ್ಗೆ ವಿಚಾರಕ್ಕೆ ನನಗೆ ಆಶ್ಚರ್ಯ ಏನೂ ಇಲ್ಲ. ಅಪರೇಷನ್ ಕಮಲಕ್ಕೆ ಬಳಸಲು ತಂದಿದ್ದ 19 ಕೋಟಿ ರೂ. ಹಣ ಸಿಕ್ಕಿಬಿದ್ದಿದೆಯಲ್ಲ. ಆ ಹಣ ಯಾರದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಜಾರಿ ನಿರ್ದೇಶನಾಲಯದವರು (ಇಡಿ) ಉತ್ತರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಪಂಚರತ್ನ ಯಾತ್ರೆಗೆ ಚಾಲನೆ ನೀಡಿದ ವೇಳೆ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು; ಪಾಪದ ಹಣ ಇಟ್ಟುಕೊಂಡು ಕರ್ನಾಟಕದಲ್ಲಿ ಆಪರೇಷನ್ ಕಮಲ ಮಾಡಿದರು. ಇದೇ ಪಾಪದ ಹಣದಲ್ಲಿ ಬೇರೆ ಬೇರೆ ರಾಜ್ಯದಲ್ಲೂ ಮಾಡಿ ಯಶಸ್ವಿಯಾಗಿದ್ದಾರೆ. ಈಗ ತೆಲಂಗಾಣದಲ್ಲಿ ಕೂಡ ಮಾಡಲು ಹೊರಟಿದ್ದಾರೆ ಎಂದು ಎಂದು ಟೀಕಿಸಿದರು.
ತೆಲಂಗಾಣದಲ್ಲಿ ಅಷ್ಟು ಸುಲಭವಾಗಿ ಅಕ್ರಮ ಹಣದಿಂದ ಸರ್ಕಾರವನ್ನು ಅಸ್ಥಿರಗೊಳಿಸುವುದು ಅಸಾಧ್ಯ. ಇವತ್ತು ನೇರವಾಗಿ 17 ಕೋಟಿ ಹಣದೊಂದಿಗೆ ಸಿಕ್ಕಿಬಿದ್ದಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಯವರು ಯಾಕೆ ಜಾಣ ಮೌನ ತಾಳಿದ್ದಾರೆ. ಪ್ರಧಾನಿ ಹಾಗೂ ಇಡಿಯವರು ಇದಕ್ಕೆ ಉತ್ತರ ಕೊಡಬೇಕಿದೆ. ಈ ಹಣ ಎಲ್ಲಿಂದ ಹೇಗೆ ಬಂತು ಎಂಬುದರ ಬಗ್ಗೆ ಹೇಳಬೇಕೆಂದು ಒತ್ತಾಯಿಸಿದರು.
ಇಂಥ ಕೆಲಸಗಳು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಸಂವಿಧಾನವೇ ಬುಡಮೇಲು ಆಗುವ ಅಪಾಯವಿದೆ. ಬಿಜೆಪಿ ಹೋಗುತ್ತಿರುವ ದಾರಿ ಸರಿಯಲ್ಲ. ಇದು ಆ ಪಕ್ಷಕ್ಕೆ ತಿರುಗುಬಾಣ ಆಗುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.
ಪಂಚರತ್ನ ಯಾತ್ರೆಗೆ ಚಾಲನೆ
ರಾಜಧಾನಿ ಬೆಂಗಳೂರಿನಲ್ಲಿ ಜೆಡಿಎಸ್ 10 ರಿಂದ 12 ಸ್ಥಾನ ಗಳಿಸಲೇಬೇಕು. ಹಾಗಾಗಿ, ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ

ಬಸವನಗುಡಿಯಲ್ಲಿ ಗುರುವಾರ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿದ ನಂತರ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್- ಬಿಜೆಪಿಯ ಪಾಪದ ಕೊಡ ತುಂಬಿದೆ. ಕಾಂಗ್ರೆಸ್ ನವರು ಯಾವ ಜೋಡೋ ಆದರೂ ಮಾಡಿಕೊಳ್ಳಲಿ, ಬಿಜೆಪಿ ಯವರು ಯಾವ ಸಂಕಲ್ಪ ಯಾತ್ರೆ ಆದರೂ ಮಾಡಿಕೊಳ್ಳಲಿ. 2023ಕ್ಕೆ ನಮ್ಮ ಪಕ್ಷವೇ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.
ಜನರಿಂದ ಲೂಟಿ ಮಾಡಿದ ಹಣವನ್ನು ಹಂಚಲು ಬರುತ್ತಾರೆ. ಒಂದು ಮತಕ್ಕೆ 2000, ಮತ್ತೆ ಕುಕ್ಕರ್ ಅಂತಾ ಬರ್ತಾರೆ. ಇದೆಲ್ಲ ಹಣ ರಾಜ್ಯದ ಜನರಿಂದ ಲೂಟಿ ಮಾಡಿರುವ ಹಣ. ಆದರೆ ನಾವು ಯಾರು ದುಡ್ಡು ಲೂಟಿ ಹೊಡೆದಿಲ್ಲ ಎಂದು ಹೇಳಿದರು. ಭಾರತ್ ಜೋಡೋ ದಿಂದ ಜನರ ಸಮಸ್ಯೆ ಗಳ ಅರ್ಥ ಆಗಲ್ಲ
ಇವಾಗ ಏನೋ ಕಾಂಗ್ರೆಸ್ ನಾಯಕರು ಪಟ್ಟಿ ಮಾಡ್ತಾರಂತೆ. ಅವರಿಂದ ಏನು ಕೂಡ ಜನರ ಸಮಸ್ಯೆ ನಿವಾರಣೆ ಮಾಡುವುದಕ್ಕೆ ಆಗುವುದಿಲ್ಲ ಎಂದು ಟಾಂಗ್ ನೀಡಿದರು.
ಇಂದು ಗವಿಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗಿದೆ. ಪವಿತ್ರ ದಿನ ಅಂತ ಇಂದು ಚಾಲನೆ ಕೊಡಲಾಗಿದೆ. ಪಂಚರತ್ನ ಕಾರ್ಯಕ್ರಮ ಮಹತ್ವದ ಕಾರ್ಯಕ್ರಮ ಎಂದರು.