-ಶೌರ್ಯ ಡೆಸ್ಕ್
ಇದೆಲ್ಲಾ ಒಂದು ವಾರದ ಹಿಂದೆ ಆಗಿದ್ದು. ಬೆಳೆಸಿದಷ್ಟೂ ಎಳೆದುಕೊಳ್ಳುತ್ತೆ. ಬಿಟ್ಟು ಬಿಡೋಣ. ಮಾತಿಗೆ ಮಾತು ಬೇಡ. ನಾನು ಹಾಗೂ ನನ್ನ ಕುಟುಂಬ ಇದನ್ನು ಇಲ್ಲಿಗೇ ಬಿಡುತ್ತಿದ್ದೇವೆ. ಮೊದಲಿಗೇ ಗೊತ್ತಾಗಿದ್ದು ಒಳ್ಳೆಯದಾಯ್ತು. ಒಂದು ವೇಳೆ ಮದುವೆ ಆದ್ಮೇಲೆ ಗೊತ್ತಾದ್ರೆ ಕಷ್ಟ ಆಗ್ತಿತ್ತು ಅಲ್ವೇ?” ಅನ್ನುವ ಮೂಲಕ ವೈಷ್ಣವಿ ಗೌಡ, ವಿದ್ಯಾಭರಣ್ ಹಳೇ ಪ್ರೇಮ ಪುರಾಣ ತನಗೆ ತಿಳಿದಿರಲಿಲ್ಲ. ಮದುವೆಗೆ ಮುನ್ನ ತಿಳಿದಿದ್ದು ಒಳ್ಳೆಯದು ಆಯಿತು ಎಂಬರ್ಥದಲ್ಲಿ ಮಾತನಾಡಿದ್ದಾರೆ.

ಕೊನೆಗೂ ಕಿರುತೆರೆ ನಟಿ ವೈಷ್ಣವಿ ಗೌಡ ನಿಶ್ಚಿತಾರ್ಥ ಮುರಿದುಕೊಂಡಿದ್ದಾರೆ. ನಿಶ್ಚಿತಾರ್ಥದ ಬಗ್ಗೆ ಇಬ್ಬರು ಹುಡುಗಿಯರು ಮಾತನಾಡಿರುವ ಆಡಿಯೋ ವೈರಲ್ ಆದ ಬೆನ್ನಲ್ಲೇ ವೈಷ್ಣವಿ ಗೌಡ ನಿಶ್ಚಿತಾರ್ಥ ಮುರಿದುಕೊಂಡಿರುವುದಾಗಿ ಇನ್ಸ್ಟಾಗ್ರಾಂ ಸ್ಟೋರಿ ಮೂಲಕ ಹೇಳಿದ್ದಾರೆ.
ವೈಷ್ಣವಿ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವ ‘ವಿರಾಜ್’ ಸಿನಿಮಾದ ನಟ ವಿದ್ಯಾಭರಣ್ ಸರಿಯಿಲ್ಲ ಎಂದು ಇಬ್ಬರು ಹುಡುಗಿಯರು ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಆದರ ಬೆನ್ನಲ್ಲೇ ಮಾಧ್ಯಮಗಳಲ್ಲಿ ಆರೋಪ-ಪ್ರತ್ಯಾರೋಪ ಚರ್ಚೆಯಾಗಿ, ಇದರಿಂದ ವೈಷ್ಣವಿ ಗೌಡ ಮನನೊಂದಿದ್ದರು.

“ನಾವು ಇದನ್ನು ಇಲ್ಲಿಗೆ ಕೈಬಿಡುತ್ತಿದ್ದೇವೆ. ಈ ವಿಷಯವನ್ನು ಮತ್ತೆ ಎಳೆಯಬೇಡಿ, ಇಲ್ಲಿಗೆ ಬಿಡಿ ಎಂದು ಎಲ್ಲರ ಬಳಿ ಮನವಿ ಮಾಡುತ್ತಿದ್ದೇನೆ. ಎಲ್ಲರ ಶುಭಹಾರೈಕೆಗೆ ಧನ್ಯವಾದಗಳು” ಎಂದು ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾ ಇನ್ ಸ್ಟಾ ಗ್ರಾಮ್ ಪೋಸ್ಟ್ ಹಾಕಿದ್ದಾರೆ.
“ನಾನು, ವಿದ್ಯಾಭರಣ್ ನಿಶ್ಚಿತಾರ್ಥ ಮಾಡಿಕೊಂಡಿಲ್ಲ. ಎರಡು ಕುಟುಂಬದವರು ಮಾತನಾಡಿಕೊಂಡಿದ್ದೆವು ಅಷ್ಟೇ. ಮದುವೆ ಬಗ್ಗೆ ನಾವಿನ್ನೂ ಯಾವ ನಿರ್ಧಾರವನ್ನು ತೆಗೆದುಕೊಂಡಿರಲಿಲ್ಲ. ಈಗಲೇ ಎಲ್ಲ ವಿಷಯ ತಿಳಿದಿದ್ದು ಗೊತ್ತಾಗಿದೆ. ಹಾಗಾಗಿ ನಾನು ಈ ಬಗ್ಗೆ ಮುಂದೆ ಹೆಜ್ಜೆ ಇಡೋದಿಲ್ಲ” ಎಂದು ವೈಷ್ಣವಿ ಗೌಡ ಅವರು ಮಾಧ್ಯಮದ ಜೊತೆ ಹೇಳಿಕೊಂಡಿದ್ದಾರೆ.

ಇಬ್ಬರೂ ಪರಸ್ಪರ ಹಾರ ಬದಲಾಯಿಸಿಕೊಳ್ಳುವ ಮತ್ತು ಸಿಹಿ ತಿನಿಸುತ್ತಿರುವ ವಿಡಿಯೋ ವೈರಲ್ ಕೂಡ ಆಗಿದ್ದವು. ಹಾಗಾಗಿ ಇಬ್ಬರೂ ಒಪ್ಪಿಕೊಂಡೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. “ಅದು ನಿಶ್ಚಿತಾರ್ಥವಲ್ಲ. ಹಣ್ಣು ಕಾಯಿ ಇಡುವ ಶಾಸ್ತ್ರ ಮಾತ್ರವಾಗಿದೆ. ಇದೆಲ್ಲಾ ಒಂದು ವಾರದ ಹಿಂದೆ ಆಗಿದ್ದು. ಬೆಳೆಸಿದಷ್ಟೂ ಎಳೆದುಕೊಳ್ಳುತ್ತೆ. ಬಿಟ್ಟು ಬಿಡೋಣ. ಮಾತಿಗೆ ಮಾತು ಬೇಡ. ನಾನು ಹಾಗೂ ನನ್ನ ಕುಟುಂಬ ಇದನ್ನು ಇಲ್ಲಿಗೇ ಬಿಡುತ್ತಿದ್ದೇವೆ. ಮೊದಲಿಗೇ ಗೊತ್ತಾಗಿದ್ದು ಒಳ್ಳೆಯದಾಯ್ತು. ಒಂದು ವೇಳೆ ಮದುವೆ ಆದ್ಮೇಲೆ ಗೊತ್ತಾದ್ರೆ ಕಷ್ಟ ಆಗ್ತಿತ್ತು ಅಲ್ವೇ?” ಅನ್ನುವ ಮೂಲಕ ವಿದ್ಯಾಭರಣ್ ಹಳೇ ಪ್ರೇಮ ಪುರಾಣ ತನಗೆ ತಿಳಿದಿರಲಿಲ್ಲ. ಮದುವೆಗೆ ಮುನ್ನ ತಿಳಿದಿದ್ದು ಒಳ್ಳೆಯದು ಆಯಿತು ಎಂಬರ್ಥದಲ್ಲಿ ಮಾತನಾಡಿದ್ದಾರೆ.

ಹಳೇ ಲವರ್ ಇರೋದು ನಿಜ: ವಿದ್ಯಾಭರಣ್
ವೈಷ್ಣವಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ವಿದ್ಯಾಭರಣ್ ಖಾಸಗಿ ಚಾನೆಲ್ ಗಳಿಗೆ ಪ್ರತಿಕ್ರಿಯೆ ನೀಡಿ, ವೈಷ್ಣವಿ ಜೊತೆಗೆ ನನ್ನ ನಿಶ್ಚಿತಾರ್ಥ ನಡೆದಿಲ್ಲ. ಎರಡು ಕುಟುಂಬದ ನಡುವೆ ಪ್ರಾಥಮಿಕ ಮಾತುಕತೆಯಾಗಿತ್ತು. ಆದರೆ ಈ ಫೋಟೋ ಎಲ್ಲಿಂದ ವೈರಲ್ ಆಯಿತು ಎನ್ನುವುದು ಗೊತ್ತಿಲ್ಲ. ನಮ್ಮ ಕುಟುಂಬದವರ ವರ್ಚಸ್ಸನ್ನು ಹಾಳು ಮಾಡಲು ಪ್ಲಾನ್ ಮಾಡಿದ್ದಾರೆ.

ನಾನು ಯಾವುದೇ ಹುಡುಗಿಯರೊಂದಿಗೆ ತಪ್ಪಾಗಿ ನಡೆದುಕೊಂಡಿಲ್ಲ. ಆಕೆ ನೇರವಾಗಿ ಬಂದು ಆರೋಪವನ್ನು ಮಾಡಬಹುದಿತ್ತು. ನನ್ನ ಮೊದಲ ಫಿಲ್ಮ್ ಬಂದಾಗಲೇ ಇವರು ಆರೋಪ ಮಾಡಬಹುದಿತ್ತು. ಹೆಸರು ಹೇಳಲು ಧೈರ್ಯವಿಲ್ಲದಿರುವ ಆಕೆ ಆರೋಪ ಮಾಡುತ್ತಿದ್ದಾಳೆ ಎಂದು ಕಿಡಿಕಾರಿದ್ದಾರೆ.
ನಾಳೆ ಕಮೀಷನರ್ ಅವರಿಗೆ ದೂರು ನೀಡುತ್ತೇನೆ. ನನ್ನ ಮೇಲೆ ಇಷ್ಟೆಲ್ಲ ಆರೋಪ ಮಾಡುವ ಬದಲು ಆಕೆಯೇ ಕಂಪ್ಲೆಂಟ್ ಕೊಡಬಹುದಿತ್ತು. ನಮ್ಮ ಏಳಿಗೆಯನ್ನು ಸಹಿಸಲು ಸಾಧ್ಯವಾಗದೇ ಇರುವ ಹಿತಶತ್ರುಗಳು ಹೀಗೆ ಮಾಡುತ್ತಿದ್ದಾರೆ. ನಾನು ಇನ್ಸ್ಟಾಗ್ರಾಮ್ ಅನ್ನು ಮೊದಲೇ ಡಿಲೀಟ್ ಮಾಡಿದ್ದೇನೆ. ನನ್ನ ಇನ್ಸ್ಟಾಗ್ರಾಮ್ ಹ್ಯಾಕ್ ಆಗಿತ್ತು. ತುಂಬಾ ಹಿಂದೆಯೇ ಡಿಲೀಟ್ ಆಗಿದೆ. ಇಂತಹ ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

‘ಈ ಹಿಂದೆ ನನಗೆ ಗರ್ಲ್ ಫ್ರೆಂಡ್ಡ್ ಇದ್ದಿದ್ದು ನಿಜ. ಇದು ಗೊತ್ತಿರುವ ವಿಚಾರ. ನಾನು ಯಾವುದೇ ಹುಡುಗಿಯೊಂದಿಗೆ ತಪ್ಪಾಗಿ ನಡೆದುಕೊಂಡಿಲ್ಲ. ಆಡಿಯೋದಲ್ಲಿ ನನ್ನ ಬಗ್ಗೆ ಯುವತಿಯೊಬ್ಬರು ಮಾತನಾಡಿದ್ದಾರೆ. ಆಕೆ ನೇರವಾಗಿಯೇ ಬಂದು ಆರೋಪ ಮಾಡಬಹುದಿತ್ತು. ಆರೋಪ ಮಾಡುವ ಬದಲು ನನ್ನ ವಿರುದ್ಧ ದೂರು ಕೊಡಬಹುದಿತ್ತು. ನಮ್ಮ ಕುಟುಂಬದ ವರ್ಚಸ್ಸು ಹಾಳು ಮಾಡುವ ಪ್ರಯತ್ನ ನಡೆದಿದೆ ಎಂದು ದೂರಿದ್ದಾರೆ.